ಧಾರವಾಡ: ಜಿಲ್ಲಾಸ್ಪತ್ರೆ ಲಸಿಕಾ ಕೇಂದ್ರದಲ್ಲಿ ಆರಂಭದಲ್ಲಿ ಕೋವಿಡ್ ವ್ಯಾಕ್ಸಿನ್ಗಾಗಿ ನೂಕು ನುಗ್ಗಲು ಉಂಟಾಗಿತ್ತು. ಮೊದಮೊದಲು ಶಾಂತ ರೀತಿಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಸಾರ್ವಜನಿಕರು, ಕೂಪನ್ ಕೊಡಲು ಆಸ್ಪತ್ರೆ ಸಿಬ್ಬಂದಿ ಬರುತ್ತಿದ್ದಂತೆ ನೂಕಾಟ ತಳ್ಳಾಟ ನಡೆಸಿದ್ದರು. ಜನದಟ್ಟಣೆ ಹಿನ್ನೆಲೆ ಬಾಗಿಲು ತೆರೆದು ಲಸಿಕೆ ಆರಂಭಿಸಿದರು.
ಕೇವಲ 50 ಡೋಸ್ ಇರುವ ಕಾರಣ 50 ಜನರಿಗೆ ಮಾತ್ರ ಎರಡನೇ ಡೋಸ್ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ಹೇಳಿದರು. ಪರಿಣಾಮ, ವ್ಯಾಕ್ಸಿನ್ಗಾಗಿ ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜನರನ್ನು ನಿಯಂತ್ರಿಸಲು ಪೊಲೀಸರು ಮಧ್ಯೆ ಪ್ರವೇಶಿಸಿದರು.
ಓದಿ:ಕೆಆರ್ಎಸ್ನಿಂದ ತಮಿಳುನಾಡಿಗೆ ನೀರು ಹರಿಸುವುದಕ್ಕೆ ಖಂಡನೆ.. ಮಂಡ್ಯದಲ್ಲಿ ರೈತರ ಪ್ರತಿಭಟನೆ