ಧಾರವಾಡ: ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದ ಹಿನ್ನೆಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಂದ ವೇಳೆ ಈ ಇಬ್ಬರು ಪೊಲೀಸರು ಕರ್ತವ್ಯಕ್ಕೆ ತಡವಾಗಿ ಬಂದಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಿಂದ ಧಾರವಾಡ ಎಸ್ಪಿ ಲೊಕೇಶ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.