ಕರ್ನಾಟಕ

karnataka

ETV Bharat / state

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ - undefined

ಧಾರವಾಡ ಬಹು ಮಹಡಿ ಕಟ್ಟಡ ಕುಸಿತ ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಡಿಸಿ ತಿಳಿಸಿದರು.

ಧಾರವಾಡ ಬಹು ಮಹಡಿ ಕಟ್ಟಡ ಕುಸಿತ

By

Published : Mar 22, 2019, 11:59 AM IST

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ಮಂಗಳವಾರ ಕುಸಿತಗೊಂಡ ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗುವುದು ಎಂದು‌ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಈವರೆಗೆ 15 ಮೃತ ದೇಹಗಳು ದೊರೆತಿವೆ. ಅವರ ಕುಟುಂಬದವರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಹಾಗೂ ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಕೋರಿ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

4 ದಿನ ಹೋರಾಡಿ ಬದುಕಿ ಬಂದ ಯುವಕ:

4 ದಿನ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿದ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕುಳಗೇರಿ ಗ್ರಾಮದ ಯುವಕ ಸೋಮು ರಾಮನಗೌಡರ (24) ಜೀವಂತವಾಗಿ ಹೊರ ಬಂದಿದ್ದಾನೆ. ಈತ ಜೆಡಿಎಸ್ ಕಚೇರಿಯಲ್ಲಿ ಆಫೀಸ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

For All Latest Updates

TAGGED:

ABOUT THE AUTHOR

...view details