ಹುಬ್ಬಳ್ಳಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ವಿಚಾರಣೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದು ಧಾರವಾಡ ಜಿಲ್ಲಾ ಪಂಚಾಯತ್ ಎಇಇಯೊಬ್ಬರನ್ನು ಸಿಬಿಐ ವಿಚಾರಣೆ ನಡೆಸುತ್ತಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ: ಧಾರವಾಡ ಜಿಲ್ಲಾ ಪಂಚಾಯತ್ ಎಇಇ ಸಿಬಿಐ ವಿಚಾರಣೆಗೆ ಹಾಜರ್ - CBI inquiry of Dharwad District Panchayat AEE
ಯೋಗೀಶ್ ಗೌಡ ಹತ್ಯೆಗೆ ಸಂಬಂಧಿಸಿದಂತೆ ಇಂದು ಧಾರವಾಡ ಜಿಲ್ಲಾ ಪಂಚಾಯತ್ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಎನ್.ಗೌಡರ್ನ್ನು ಸಿಬಿಐ ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಪಂಚಾಯತ್ ರಾಜ್ ಇಲಾಖೆಯ ಧಾರವಾಡ ಸಬ್ ಡಿವಿಜನ್ನಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಎನ್.ಗೌಡರ್ ಇದೀಗ ಸಿಬಿಐ ಮುಂದೆ ಹಾಜರಾಗಿದ್ದಾರೆ. ಯೋಗೀಶ್ ಗೌಡ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾಗ ಎಸ್.ಎನ್.ಗೌಡರ್ ಚುನಾವಣಾ ನೋಡಲ್ ಅಧಿಕಾರಿಯಾಗಿದ್ದರು. ಅಂದಿನ ಚುನಾವಣೆಯ ಹಿಂದಿನ ದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಯೋಗೀಶ್ ಗೌಡರ ಮೇಲೆ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದರು. ಜೈಲಿನಲ್ಲಿರುವಾಗಲೇ ಸ್ಪರ್ಧೆ ಮಾಡಿ ಯೋಗೀಶ್ ಗೌಡ ಗೆದ್ದು ಬಂದಿದ್ದರು.
ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಗೌಡರ್ ಅವರನ್ನು ಸಿಬಿಐ ಅಧಿಕಾರಿಗಳು ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ. ವಿನಯ ಕುಲಕರ್ಣಿ ಸಮ್ಮುಖದಲ್ಲೇ ಮತ್ತೆ ಮಾಹಿತಿಯನ್ನು ಪಡೆಯಲಾಗುತ್ತದೆ ಎನ್ನಲಾಗಿದೆ.