ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆ ತೀವ್ರಗೊಂಡಿದೆ. ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಸಿಬಿಐ ವಿಚಾರಣೆಗೆ ಇಂದು ಪ್ರಮುಖರು ವಿಚಾರಣೆಗೆ ಆಗಮಿಸಿದ್ದಾರೆ.
ಯೋಗೇಶ್‌ಗೌಡ ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಸವರಾಜ ಮುತ್ತಗಿ ವಿಚಾರಣೆಗೆ ಹಾಜರ್ - cbi grill accuse basavraj muttagi
ಧಾರವಾಡ ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಇಂದು ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಹಾಗೂ ಹತ್ಯೆಗೆ ಬಳಸಿದ್ದ ವಾಹನದ ಮಾಲೀಕ ಚಂದ್ರು ಪೂಜಾರರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.
ಧಾರವಾಡ
ಕೊಲೆ ನಡೆದ ವೇಳೆ ಕಪ್ಪು ಬಣ್ಣದ ಕಾರು ಬಳಕೆಯಾಗಿದ್ದು ಪತ್ತೆಯಾಗಿತ್ತು. ಆ ಕಾರು ಚಂದ್ರು ಪೂಜಾರ್‌ಗೆ ಸೇರಿದ್ದು ಎನ್ನಲಾಗಿತ್ತು. ಆ ಹಿನ್ನೆಲೆಯಲ್ಲಿ ಚಂದ್ರು ಪೂಜಾರ್‌ನನ್ನು ಸಿಬಿಐ ವಿಚಾರಣೆಗೆ ಕರೆಸಿಕೊಂಡಿದೆ. ಒಟ್ಟಿನಲ್ಲಿ ಈಗಾಗಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ್ ಕುಲಕರ್ಣಿ ಸೇರಿದಂತೆ ಹಲವರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ಆ ಹಿನ್ನೆಲೆ ಯೋಗೇಶ್‌ಗೌಡ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದು ಕೊಳ್ಳುತ್ತಿದೆ.
TAGGED:
ಯೋಗೇಶ್‌ಗೌಡ ಕೊಲೆ ಪ್ರಕರಣ