ಧಾರವಾಡ :ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕಣರದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತೀರ್ಪು ಇಂದು ಹೊರಬೀಳುವ ಸಾಧ್ಯತೆಯಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!
ಒಂದು ವೇಳೆ ಕುಲಕರ್ಣಿ ಅವರಿಗೆ ಜಾಮೀನು ಸಿಕ್ರೇ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಇಲ್ಲದೇ ಹೋದಲ್ಲಿ ಮುಂದಿನ ಕಾನೂನು ಹೋರಾಟ ಮಾಡಲು ದಾರಿಯಾಗಲಿದೆ. ಇಲ್ಲವೇ ನ್ಯಾಯಾಲಯ ವಿಚಾರಣೆ ಮುಂದೂಡುವ ಸಾಧ್ಯತೆಗಳನ್ನು ಸಹ ಅಲ್ಲಗಳೆಯುವಂತಿಲ್ಲ..
ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯ ವಾದ-ಪ್ರತಿವಾದಗಳೆಲ್ಲವೂ ನಡೆದಿದೆ. ಇಂದು ತೀರ್ಪು ಕಾಯ್ದಿರಿಸಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನದೊಳಗೆ ಮಾಜಿ ಸಚಿವರ ಭವಿಷ್ಯ ನಿರ್ಧಾರವಾಗಲಿದೆ.
ಒಂದು ವೇಳೆ ಕುಲಕರ್ಣಿ ಅವರಿಗೆ ಜಾಮೀನು ಸಿಕ್ರೇ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಇಲ್ಲದೇ ಹೋದಲ್ಲಿ ಮುಂದಿನ ಕಾನೂನು ಹೋರಾಟ ಮಾಡಲು ದಾರಿಯಾಗಲಿದೆ. ಇಲ್ಲವೇ ನ್ಯಾಯಾಲಯ ವಿಚಾರಣೆ ಮುಂದೂಡುವ ಸಾಧ್ಯತೆಗಳನ್ನು ಸಹ ಅಲ್ಲಗಳೆಯುವಂತಿಲ್ಲ. ಅತ್ತ ಅವರ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಸಹ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ.