ಕರ್ನಾಟಕ

karnataka

ETV Bharat / state

ನರೇಗಾ ಕಾಮಗಾರಿ ವೀಕ್ಷಿಸಿದ ಧಾರವಾಡ ಜಿಪಂ​ ಅಧ್ಯಕ್ಷೆ - ವಿಜಯಲಕ್ಷ್ಮೀ ಪಾಟೀಲ ಲೆಟೆಸ್ಟ್​ ನ್ಯೂಸ್​

ಧಾರವಾಡ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ನರೇಗಾ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ವೀಕ್ಷಣೆ ಮಾಡಿದರು. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುವಂತೆ ಕಾರ್ಮಿಕರಿಗೆ ಸೂಚಿಸಿದರು.

By

Published : Apr 22, 2020, 10:17 PM IST

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆಯುತ್ತಿರುವ ನರೇಗಾ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ವೀಕ್ಷಣೆ ಮಾಡಿದರು.

ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಮ್ಮಿಹಾಳ ಗ್ರಾಮದ ನೀರು ಕಾಲುವೆ ಕಾಮಗಾರಿ ಹಾಗೂ ಜಿನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಿನ್ನೂರು-ಮಲಕನಕೊಪ್ಪ ರಸ್ತೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಮಳೆಗಾಲಕ್ಕೆ ಮುಂಚಿತವಾಗಿ ಗುಂಡಿ ನಿರ್ಮಾಣದ ಕಾಮಗಾರಿ ಮತ್ತು ಬೀರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಡಲಗಟ್ಟಿ ಗ್ರಾಮದ ಕೆರೆ ಹೂಳು ತೆಗೆಯುವ ಕಾಮಗಾರಿಗಳ ವೀಕ್ಷಣೆ ಮಾಡಿದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುವಂತೆ ಕಾರ್ಮಿಕರಿಗೆ ಸೂಚಿಸಿದರು.

For All Latest Updates

TAGGED:

ABOUT THE AUTHOR

...view details