ಹುಬ್ಬಳ್ಳಿ:ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಆಕೆಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಜನತಾ ಬಜಾರ್ನದಲ್ಲಿರುವ ಭಾಸ್ಕರ್ ರಾವ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಉಣಕಲ್ ಗ್ರಾಮದ ಶಾಂತಮ್ಮ ಎಂಬ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಳಿಕ ಈ ಘಟನೆ ನಡೆದಿದೆ.
Doctor's Dayಯಂದೇ ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ವೈದ್ಯ..! ಹುಬ್ಬಳ್ಳಿಯಲ್ಲಿ ನಡೆದಿದ್ದೇನು? - Doctors day,
ಮಹಿಳೆಯ ಸಾವಿನಿಂದ ಆಕ್ರೋಶಗೊಂಡ ಸಂಬಂಧಿಕರು ವೈದ್ಯನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. Doctors day ದಿನದಂದೇ ರಕ್ಷಣೆಗಾಗಿ ವೈದ್ಯರೊಬ್ಬರು ಪೊಲೀಸರ ಮೊರೆ ಹೋಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಶಾಂತಮ್ಮ ಸಾವಿನ ಬಳಿಕ ಆಕೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸಂಬಂಧಿಕರ ಆಕ್ರೋಶ ಕಂಡು ಬೆದರಿದ ವೈದ್ಯರು ಪಕ್ಕದಲ್ಲಿದ್ದ ಠಾಣೆಗೆ ಓಡಿ ರಕ್ಷಣೆ ಪಡೆದುಕೊಂಡಿದ್ದಾರೆ. ಡಾ.ಭಾಸ್ಕರ್ ರಾವ್ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಶಾಂತಮ್ಮ ದಾಖಲಾಗಿದ್ದರು. ಆದ್ರೆ ಮಹಿಳೆ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಆಕ್ರೋಶಗೊಂಡರು.
ಶಾಂತಮ್ಮ ಸಂಬಂಧಿಕರು ವೈದ್ಯರು ಹಾಗೂ ಆಸ್ಪತ್ರೆಯಲ್ಲಿನ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದರು. ಈ ವೇಳೆ ವೈದ್ಯರು ಮತ್ತು ಸಿಬ್ಬಂದಿ ಸಮೀಪದ ಪೊಲೀಸ್ ಠಾಣೆಗೆ ಓಡಿ ರಕ್ಷಣೆ ಪಡೆದಿದ್ದಾರೆ. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.