ಹುಬ್ಬಳ್ಳಿ :ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಫಲತೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ - latest news of hubli
ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಸಹ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲವೆಂದೂ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿಫಲತೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಬಂದಾಗ ಕೇಂದ್ರ ಸರ್ಕಾರ ಸ್ಪಂದಿಸಬೇಕು. ರಾಜ್ಯದಲ್ಲಿ ಇಷ್ಟೆಲ್ಲಾ ಪ್ರವಾಹ ಸಂಭವಿಸಿ ಸಾಕಷ್ಟು ಸಮಸ್ಯೆಯಾದರೂ ಸಹ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತೋರಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯವರು ಅನರ್ಹ ಶಾಸಕರ ಸಮಸ್ಯೆಗೆ ಸ್ಪಂದಿಸಲು ವರಿಷ್ಟರ ಬಳಿ ಹೋಗಿದ್ದಾರೆ, ಆದರೆ ರಾಜ್ಯದ ಸಮಸ್ಯೆಗೆ ಸ್ಪಂದಿಸಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ 25 ಜನ ಸಂಸದರಿದ್ದರೂ ಸಹ ಸಮಸ್ಯೆಯನ್ನ ಎತ್ತಿ ಹಿಡಿಯುತ್ತಿಲ್ಲ, ಈವರೆಗೂ ಯಾವುದೇ ಸರ್ವಪಕ್ಷ ಸಭೆ ಮಾಡಿಲ್ಲ, ರಾಜ್ಯದಲ್ಲಿ ನೆರೆ ಪರಿಹಾರಕ್ಕೆ ಮುಂದಾಗಿಲ್ಲ ಹಾಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆಂದರು.