ಕರ್ನಾಟಕ

karnataka

ETV Bharat / state

ಮರಾಠ ನಿಗಮ ಸ್ಥಾಪನೆ ನಿರ್ಧಾರವನ್ನು ಸ್ವಾಗತಿಸಿದ ದಿಂಗಾಲೇಶ್ವರ ಸ್ವಾಮೀಜಿ - ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪನೆ

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯ ರಾಜ್ಯ ಸರ್ಕಾರದ ನಿರ್ಧಾರವನ್ನು ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಸ್ವಾಗತಿಸಿದ್ದಾರೆ. ಈ ಮೂಲಕ ಅವರು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ
ದಿಂಗಾಲೇಶ್ವರ ಸ್ವಾಮೀಜಿ

By

Published : Nov 17, 2020, 6:16 PM IST

ಹುಬ್ಬಳ್ಳಿ:ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹ ಎನ್ನುವ ಮೂಲಕ ಮರಾಠರ ಪರವಾಗಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿದ್ದಾರೆ.

ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಲಿಂಗಾಯತ-ವೀರಶೈವ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸ್ವಾಮೀಜಿ ಸ್ವಾಗತಿಸಿದರು. ಈಗಾಗಲೇ ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರಕ್ಕೆ ಸಾಕಷ್ಟು ಕನ್ನಡ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿ, ಎಲ್ಲೆಡೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ. ಆದರೆ ದಿಂಗಾಲೇಶ್ವರ ಸ್ವಾಮೀಜಿ ಅವರು ಮರಾಠ ನಿಗಮ ಸ್ಥಾಪನೆ ಸ್ವಾಗತಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಗಡಿಯಲ್ಲಿ ಮರಾಠ ಹಾಗೂ ಕನ್ನಡದ ಮುಸುಕಿನ ಗುದ್ದಾಟ ನಡೆಯುತ್ತಿದ್ದರೂ, ಸ್ವಾಮೀಜಿ ಮರಾಠ ನಿಗಮ ಸ್ಥಾಪನೆಯನ್ನು ಸ್ವಾಗತಿಸಿರುವುದು ಕನ್ನಡ ಹೋರಾಟಗಾರರಿಗೆ ಅಸಮಾಧಾನ ಉಂಟು ಮಾಡುವ ಸಾಧ್ಯತೆ ಹೆಚ್ಚಿದೆ.

ABOUT THE AUTHOR

...view details