ಧಾರವಾಡ:ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಹಾಗೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಹೆಬ್ಬಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರಕೃತಿ ವಿಕೋಪ ಪರಿಹಾರ ತಾರತಮ್ಯ ಮರು ಸಮೀಕ್ಷೆಗೆ ಹೆಬ್ಬಳ್ಳಿ ಗ್ರಾಮಸ್ಥರ ಆಗ್ರಹ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಗೆ ಮನವಿ ಸಲ್ಲಿಸಿದರು.
ಆಗಸ್ಟ್ - ಸಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದ ಹೆಬ್ಬಳ್ಳಿ ಗ್ರಾಮದ ಸಾಕಷ್ಟು ಮನೆಗಳು ಬಿದ್ದು ಹೋಗಿವೆ. ಗ್ರಾಮದ ಬಹಳ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮನೆ ಕಳೆದುಕೊಂಡ ನಿರಾಶ್ರಿತರಿಗೆ ನೋಡಲ್ ಅಧಿಕಾರಿಗಳು ಸಮೀಕ್ಷೆ ಮಾಡಿದ್ದು, ಎಬಿಸಿ ಗ್ರೇಡ್ ನೀಡುವಲ್ಲಿ ಸಾಕಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಮನೆಗಳ ಮರು ಸಮೀಕ್ಷೆ ಮಾಡಿ ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.