ಕರ್ನಾಟಕ

karnataka

ETV Bharat / state

ಅಭಿವೃದ್ಧಿಗೆ ಒತ್ತು.. ಹು-ಧಾ ಪಾಲಿಕೆ ವಾರ್ಡ್​ಗಳಿಗೆ 50 ಲಕ್ಷ ರೂ. ಅನುದಾನ - ಹುಬ್ಬಳ್ಳಿ ಧಾರವಾಡ ಸಮಸ್ಯೆಗಳು

ಹುಬ್ಬಳ್ಳಿ-ಧಾರವಾಡ ಸಮಸ್ಯೆಗಳು ಮತ್ತು ಸರ್ವಾಂಗೀಣ ಅಭಿವೃದ್ಧಿ ಕುರಿತು ಇಂದಿನ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

Hubli-Dharwad Palike General Meeting
ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸಾಮಾನ್ಯ ಸಭೆ

By

Published : Jun 30, 2022, 5:41 PM IST

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದ ಅಭಿವೃದ್ಧಿ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡ್​​ಗೆ 50 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೇ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆಯೆಂದು ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು.

ಪಾಲಿಕೆಯ ಮೊದಲ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅವಳಿನಗರದ ಜ್ವಲಂತ ಸಮಸ್ಯೆಗಳ ನಿವಾರಣೆ, ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸೋಣ. ಈಗಾಗಲೇ ಅಭಿವೃದ್ಧಿ ಕಾರ್ಯಗಳಿಗೆ ತಡೆಯಾಗಿದೆ. ಈ ಹಿನ್ನೆಲೆ ಪ್ರತಿ ವಾರ್ಡ್ ಸದಸ್ಯರಿಗೂ ತಲಾ 50 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡೋಣ ಎಂದ ಅವರು, ತಮ್ಮನ್ನು ಮೇಯರ್ ಆಗಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸಾಮಾನ್ಯ ಸಭೆ

ಪಾಲಿಕೆ ಸಭಾಭವನ: ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ದಿ.ಸುಧೀರ್ ಸರಾಫ್ ಅವರು ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಪಾಲಿಕೆ ಸಭಾಭವನ ನಿರ್ಮಾಣದ ಕನಸನ್ನು ಕಂಡಿರುವ ಬಗ್ಗೆ ಪಾಲಿಕೆ ಸದಸ್ಯ ವೀರಣ್ಣ ಸವಡಿ ಪ್ರಸ್ತಾಪಿಸಿದರು. 67 ಚುನಾಯಿತ ಪ್ರತಿನಿಧಿಗಳಿಗೆ ಕುಳಿತು ಸಭೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಈಗ 82 ವಾರ್ಡ್ ಸದಸ್ಯರು ಹಾಗೂ ಸಾರ್ವಜನಿಕರಿಗೆ ಆಸನಕ್ಕೆ ವ್ಯವಸ್ಥೆ ಮಾಡಲು ಹೊಸ ಸಭಾಭವನ ನಿರ್ಮಾಣ ಮಾಡುವ ಬಗ್ಗೆ ಧ್ವನಿ ಎತ್ತಿದರು.

ಭಾಷಣ ಬೇಡ, ಸಮಸ್ಯೆ ಬಗ್ಗೆ ಧ್ವನಿ ಎತ್ತಿ: ಪಾಲಿಕೆ ಸಭೆ ಆರಂಭದಲ್ಲಿಯೇ ಸದಸ್ಯರ ನಡುವೆ ಗಲಾಟೆ ಉಂಟಾಯಿತು. ಮೇಯರ್ ಭಾಷಣ ಮುಕ್ತಾಯಗೊಳ್ಳುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾಯಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ:ಚಿಕ್ಕಮಗಳೂರು: ಕೆರೆಗಳ ಅಭಿವೃದ್ಧಿ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪ.. ಎಇಇ ಅಮಾನತು

ಸಭಾಭವನದಲ್ಲಿ ಮೇಯರ್ ಭಾಷಣ ಮುಕ್ತಾಯಗೊಂಡ ನಂತರ ಸರ್ವ ಸದಸ್ಯರು ಮೇಯರ್ ಭಾಷಣದ ಬಗ್ಗೆ ಅಭಿಪ್ರಾಯ ವ್ಯಕ್ಯಪಡಿಸಬೇಕಿತ್ತು. ಈ ಸಂದರ್ಭದಲ್ಲಿ ಧ್ವನಿ ಎತ್ತಿದ ಸುವರ್ಣ ಕಲಕುಂಟ್ಲ ಅವರು, ಭಾಷಣ ಬೇಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಧ್ವನಿ ಎತ್ತೋಣ ಎಂದು ಸಮಸ್ಯೆಗಳ ಬಗ್ಗೆ ಮಾತನಾಡಲು ಮುಂದಾದ ಸಂದರ್ಭದಲ್ಲಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಬಳಿಕ ಸದಸ್ಯರು ಒಕ್ಕೋರಲಿನಿಂದ ಮೇಯರ್ ಭಾಷಣಕ್ಕೆ ಅನುಕೂಲ ಮಾಡಿಕೊಟ್ಟರು.

ABOUT THE AUTHOR

...view details