ಹುಬ್ಬಳ್ಳಿ :ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಅನೀಲ್‌ಕುಮಾರ್ ಪಾಟೀಲ್ ಅವರು ನಿರಾಶ್ರಿತರಿಗೆ ಹಾಗೂ ಸಾರ್ವಜನಿಕರಿಗೆ ಆಹಾರ ಧಾನ್ಯ ಹಾಗೂ ಹಣ್ಣು ವಿತರಣೆ ಮಾಡಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸಾರ್ವಜನಿಕರು ಸಾಮಾಗ್ರಿಗಳನ್ನು ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿದ್ದವು. ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿದೆ. ಸಾರ್ವಜನಿಕರು ದುಡಿಮೆ ಇಲ್ಲದೆ ಮನೆಯಲ್ಲಿರುವ ಕಾರಣ ಆರ್ಥಿಕ ಸಮಸ್ಯೆ ಜೊತೆಗೆ ಆಹಾರಕ್ಕಾಗಿ ಕೂಡ ಜನ ಸಮಸ್ಯೆ ಎದುರಿಸುವಂತಾಗಿದೆ.
ಬಡವರಿಗೆ ಆಹಾರ ಧಾನ್ಯ ಹಾಗೂ ಹಣ್ಣನ್ನು ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕ ಖರ್ಚಿನಿಂದ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಇನ್ನೂ ಕಾಂಗ್ರೆಸ್ ಪಕ್ಷದ ಕೋಪನ್ ವಿತರಣೆ ಮಾಡುವ ಮೂಲಕ ಸಾರ್ವಜನಿಕರಿಗೆ ಆಹಾರ ಧಾನ್ಯ ಕಿಟ್ ಹಾಗೂ ಹಣ್ಣು ವಿತರಣೆ ಮಾಡಿದರು.
ಆಹಾರ ಧಾನ್ಯ ಪಡೆದುಕೊಳ್ಳಲು ಸಾರ್ವಜನಿಕರು ನುಕುನುಗ್ಗಲು ಮಾಡುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುಗಿಬಿದ್ದಿರುವುದು ಕಂಡು ಬಂದಿತು. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಹಾರ ಧಾನ್ಯ ಪಡೆದುಕೊಳ್ಳಲು ಅನೀಲ್‌ಕುಮಾರ್ ಪಾಟೀಲ್ ಅವರು ಮನವಿ ಮಾಡಿದರು. ಇನ್ನೂ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿ ಹೇಳಿದರು.