ಹುಬ್ಬಳ್ಳಿ: ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ್ ಇಂದು ಹುಬ್ಬಳ್ಳಿ ತಹಶೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿವೆ. ಮಿನಿ ವಿಧಾನಸೌಧಕ್ಕೆ ಆಗಮಿಸುವ ಸಾರ್ವಜನಿಕರ ಸ್ಕ್ರೀನಿಂಗ್ ಕಟ್ಟುನಿಟ್ಟಾಗಿ ಮಾಡಬೇಕು. ಪ್ರತ್ಯೇಕ ವಾಟ್ಸ್ಆ್ಯಪ್ ಸಂಖ್ಯೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ, ತಕ್ಷಣವೇ ದೂರು ಹಾಗೂ ಮನವಿಗಳಿಗೆ ಸ್ಪಂದಿಸಬೇಕು. ಕಚೇರಿಗಳಿಗೆಅನಗತ್ಯವಾಗಿ ಸಾರ್ವಜನಿಕರು ಆಗಮಿಸುವುದು ತಪ್ಪಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.