ಧಾರವಾಡ: ಜಿಲ್ಲಾಸ್ಪತ್ರೆಯ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ನಗರದ ನಿವಾಸಿಯೊಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಹಲವು ವರ್ಷಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ 10 ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಹಾಗಾಗಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲು ಮಾಡಲಾಗಿತ್ತು.