ಹುಬ್ಬಳ್ಳಿ:ಕುಂದಗೋಳ ಉಪ ಚುನಾವಣೆಗೆ ಮೂರೇ ದಿನ ಬಾಕಿ ಇದ್ದು, ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಈ ಬಗ್ಗೆ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.
ಕುಂದಗೋಳ ಉಪ ಕದನ: ಕೊನೆ ಹಂತದ ರಣತಂತ್ರಕ್ಕೆ ಮುಂದಾದ ಡಿಕೆಶಿ ಟೀಂ - Hubballi
ಕುಂದಗೋಳ ಉಪ ಚುನಾವಣೆಯ ಉಸ್ತುವಾರಿ ಹೊತ್ತಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಪಕ್ಷದ ಮುಖಂಡರೆಲ್ಲ ಸೇರಿ ಅಂತಿಮ ಹಂತದ ಚುನಾವಣಾ ರಣತಂತ್ರ ರೂಪಿಸುತ್ತಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಮುಖಂಡರು
ನಗರದ ಕಾಟನ್ ಕೌಂಟಿ ಕ್ಲಬ್ ರೆಸಾರ್ಟ್ನಲ್ಲಿ ಸಭೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಚುನಾವಣಾ ರಣತಂತ್ರ ರೂಪಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಆರ್.ಬಿ. ತಿಮ್ಮಾಪುರ್, ಮಾಜಿ ಸಚಿವೆ ಮೋಟಮ್ಮ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸೇರಿದಂತೆ ಇತರೆ ಸ್ಥಳೀಯ ಮುಖಂಡರು ಸಹ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
Last Updated : May 16, 2019, 3:54 PM IST