ಕರ್ನಾಟಕ

karnataka

ETV Bharat / state

ಹು-ಧಾ ಪಾಲಿಕೆ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಳ್ಳಂ ಬೆಳಗ್ಗೆ ಟೆಂಪಲ್​ ರನ್​ - DK shivakumar Temple Run

ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಇಂದು ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠ ಹಾಗೂ ಸ್ಯೆಯದ್ ಫತೇಶಾವಲಿ ದರ್ಗಾಕ್ಕೆ ಭೇಟಿ ನೀಡಿದರು.

DK shivakumar started Temple Run in hubli
ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಡಿ‌.ಕೆ. ಶಿವಕುಮಾರ್

By

Published : Aug 29, 2021, 11:12 AM IST

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬೀಡುಬಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್ ಬೆಳ್ಳಂ ಬೆಳಗ್ಗೆ ಟೆಂಪಲ್​ ರನ್​ ಮಾಡಿದ್ರು.

ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಡಿ‌.ಕೆ. ಶಿವಕುಮಾರ್

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠ ಹಾಗೂ ಸ್ಯೆಯದ್ ಫತೇಶಾವಲಿ ದರ್ಗಾಕ್ಕೆ ಭೇಟಿ ನೀಡಿದ ಅವರು, ಸಿದ್ಧಾರೂಢ ಮಠದಲ್ಲಿ ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹಳೇ ಹುಬ್ಬಳ್ಳಿಯ ಸೈಯದ್ ಫತೇಶಾವಲಿ ದರ್ಗಾಕ್ಕೆ ಸಹ ಭೇಟಿ ನೀಡಿದರು.

ನಿನ್ನೆ ರಾತ್ರಿ ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಮೂಜಗು ಶ್ರೀಗಳ ಆಶೀರ್ವಾದ ಪಡೆದಿದ್ದ ಡಿಕೆಶಿ, ಇಂದು ಬೆಳಗ್ಗೆಯಿಂದಲೇ ಟೆಂಪಲ್​ ರನ್ ಪ್ರಾರಂಭಿಸುವ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ.

ABOUT THE AUTHOR

...view details