ಹುಬ್ಬಳ್ಳಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹುಬ್ಬಳ್ಳಿಗೆ ಡಿಕೆಶಿ ಭೇಟಿ: ಸಾಮಾಜಿಕ ಅಂತರ ಕಾಪಾಡುವಂತೆ ಕಾರ್ಯಕರ್ತರಿಗೆ ಮನವಿ - dk shivkumar latest news
ಕಾಂಗ್ರೆಸ್ ಸದಸ್ಯತ್ವ ಕಾರ್ಯಕ್ರಮದಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳದೆ ಇದ್ದ ಕಾರ್ಯಕರ್ತರನ್ನು ನೋಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಹುಬ್ಬಳ್ಳಿಗೆ ಡಿಕೆಶಿ ಎಂಟ್ರಿ; ಸಾಮಾಜಿಕ ಅಂತರ ಕಾಪಾಡುವಂತೆ ಮನವಿ
ನಗರದ ಆರ್.ಎನ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾದರು. ಕಾಂಗ್ರೆಸ್ ಸದಸ್ಯತ್ವ ಕಾರ್ಯಕ್ರಮದಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳದೆ ಇದ್ದ ಕಾರ್ಯಕರ್ತರನ್ನು ನೋಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಕಲ್ಯಾಣ ಮಂಟಪದಿಂದ ಕಾರ್ಯಕರ್ತರನ್ನು ಹೊರಗಡೆ ಕಳುಹಿಸಲು ಕೈ ನಾಯಕರು ಹರಸಹಾಸ ಪಡುವಂತಾಯಿತು.