ಕರ್ನಾಟಕ

karnataka

ETV Bharat / state

ಕೊರೊನಾ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳಿಗೆ ಅಗತ್ಯ ಸಹಾಯ: ಜಿಲ್ಲಾಧಿಕಾರಿ - Doctors meeting in Hubbali

ಇನ್ನೂ 350 ಹಾಸಿಗೆಗಳನ್ನು ಕೋವಿಡ್ -19 ರೋಗಿಗಳಿಗಾಗಿ ಮಾರ್ಪಡಿಸಲಾಗುತ್ತದೆ. ಒಟ್ಟು 600‌ ಹಾಸಿಗೆಗಳನ್ನು ಕಿಮ್ಸ್ ನಲ್ಲಿ ಕೋವಿಡ್ ರೋಗಿಗಳಿಗಾಗಿ ಮೀಸಲಿರಿಸಲಾಗುವುದು. ಈಗಾಗಲೇ ಧಾರವಾಡದ ಎಸ್​ಡಿಎಂ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಆ್ಯಂಟಿಜನ್ ಟೆಸ್ಟ್​ಗಳನ್ನು ನೀಡಿದ್ದು, ಬಹುಬೇಗನೆ ಕೋವಿಡ್ ಪತ್ತೆ ಹಚ್ಚಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದರು.

ವೈದ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ
ವೈದ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ

By

Published : Jul 19, 2020, 10:40 PM IST

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೋಗಿಗಳ ಸಂಖ್ಯೆ ಅಧಿಕವಾಗಿದೆ. ಕಿಮ್ಸ್ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಖಾಸಗಿ ಆಸ್ಪತ್ರೆಗಳು ಶೇ 50 ರಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು. ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಾಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸಭೆ

ಹುಬ್ಬಳ್ಳಿಯ ಬೈಲಪ್ಪನವರ ನಗರದಲ್ಲಿರುವ ಐಎಂಎ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂದಾಜು ಎರಡು ಸಾವಿರ ಕೋವಿಡ್-19 ಪ್ರಕರಣಗಳು ದೃ ಢಪಟ್ಟಿವೆ. ಯಾವುದೇ ಲಕ್ಷಣಗಳು ಇಲ್ಲದ ಎಲ್ಲಾ ರೋಗಿಗಳಿಗೆ ಜಿಲ್ಲಾಡಳಿತದಿಂದಲೇ ಕೋವಿಡ್ ಹಾರೈಕೆ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಸಾರಿ ಹಾಗೂ ಐಎಲ್‌ಐ ಸೇರಿದಂತೆ ಇತರೆ ಗಂಭೀರ ಲಕ್ಷಣವುಳ್ಳವರನ್ನು ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲಿಸಲಾಗುವುದು. ಕಿಮ್ಸ್, ಡಿಮಾನ್ಸ್ ಹಾಗೂ ಎನ್ಎಂಆರ್ ಲ್ಯಾಬ್​ಗಳಲ್ಲಿ ಆರ್​ಟಿಪಿಸಿಆರ್​ ತಂತ್ರಜ್ಞಾನ ಬಳಸಿ ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ದಿನಕ್ಕೆ 1,300 ಟೆಸ್ಟ್​ಗಳನ್ನು ಮಾಡಲಾಗುತ್ತಿದೆ ಎಂದರು.

ಬೆಳಗಾವಿ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಮಾದರಿಗಳನ್ನು ಪರೀಕ್ಷೆಗಾಗಿ ಜಿಲ್ಲೆಗೆ ಕಳುಸಿಕೊಡಲಾಗುತ್ತದೆ. ಇದರಿಂದಾಗಿ ಪರೀಕ್ಷಾ ವರದಿ ನೀಡುವುದು ಸ್ವಲ್ಪ ತಡವಾಗುತ್ತದೆ. 1,200 ಹಾಸಿಗೆಗಳ ಸಾಮರ್ಥ್ಯವುಳ್ಳ ಕಿಮ್ಸ್ ನಲ್ಲಿ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಬದಲಾಯಿಸಲಾಗಿದೆ. ಇನ್ನೂ 350 ಹಾಸಿಗೆಗಳನ್ನು ಕೋವಿಡ್ -19 ರೋಗಿಗಳಿಗಾಗಿ ಮಾರ್ಪಡಿಸಲಾಗುತ್ತದೆ. ಒಟ್ಟು 600‌ ಹಾಸಿಗೆಗಳನ್ನು ಕಿಮ್ಸ್ ನಲ್ಲಿ ಕೋವಿಡ್ ರೋಗಿಗಳಿಗಾಗಿ ಮೀಸಲಿರಿಸಲಾಗುವುದು. ಈಗಾಗಲೇ ಧಾರವಾಡದ ಎಸ್​ಡಿಎಂ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್-19 ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಆ್ಯಂಟಿಜನ್ ಟೆಸ್ಟ್​ಗಳನ್ನು ನೀಡಿದ್ದು, ಬಹುಬೇಗನೆ ಕೋವಿಡ್ ಪತ್ತೆ ಹಚ್ಚಬಹುದಾಗಿದೆ ಎಂದು ತಿಳಿಸಿದರು.

ವೈದ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ

‌ಜಿಲ್ಲೆಯ ಹಲವು ಖಾಸಗಿ ಆಸ್ಪತ್ರೆಗಳು ಕೋವಿಡ್ -19 ರೋಗಿಗಳಿಗೆ ಹಾಸಿಗೆಗಳನ್ನು ನೀಡಲು ಮುಂದೆ ಬಂದಿವೆ. ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ, ಈಗಾಗಲೇ ಗುಣಮುಖರಾಗಿರುವ ಕೋವಿಡ್ ರೋಗಿಗಳ ಮಾಹಿತಿಯನ್ನು ನೀಡಲಾಗುವುದು. ಯಾವುದೇ ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರ ಕೋವಿಡ್ ತಪಾಸಣೆ ನಡೆಸಲು ಹಣ ತೆಗೆದುಕೊಳ್ಳಬಾರದು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಖಾಸಗಿ ನೀಡುವ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಊಟ ಸರಬರಾಜು ಮಾಡಲಾಗುವುದು. ಸ್ವಚ್ಛತಾ ಸಿಬ್ಬಂದಿ ಸೇರದಂತೆ ನಿರ್ವಹಣೆಗಾಗಿ ಇತರೆ ಅಗತ್ಯ ಸಿಬ್ಬಂದಿಗಳನ್ನು ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗುವುದು ಎಂದು ಹೇಳಿದರು.

ಖಾಸಗಿ ಕ್ಯಾನ್ಸರ್ ಹಾಗೂ ಹೆರಿಗೆ ಆಸ್ಪತ್ರೆಗಳಿಗೆ ಕೋವಿಡ್-19 ಚಿಕಿತ್ಸೆ ನೀಡುವುದರಿಂದ ವಿನಾಯಿತಿ ನೀಡಬೇಕು ಎಂದು ಖಾಸಗಿ ವೈದ್ಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ABOUT THE AUTHOR

...view details