ಹುಬ್ಬಳ್ಳಿ :ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರನ್ನು ದುರುದ್ದೇಶದಿಂದ ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ನಗರದ ವಿವಿಧ ಸಂಘಟನೆಗಳ ಸದಸ್ಯರು ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಾಲಿಕೆ ವೈದ್ಯಾಧಿಕಾರಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ - latest protest news
ಹುಬ್ಬಳ್ಳಿ ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರ ಅವರ ಮೇಲಿನ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತು ಸತ್ಯಾಸತ್ಯತೆ ಅವಲೋಕಿಸಿ ಕ್ರಮ ಕೈಗೊಳ್ಳಬೇಕು. ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿದರು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಲೈಂಗಿಕ ಕಿರುಕುಳದ ಬಗ್ಗೆ ಮಹಿಳೆ ಪೋಲಿಸರಿಗೆ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತು ಸತ್ಯಾಸತ್ಯತೆ ಅವಲೋಕಿಸಬೇಕು. ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಪಾಲಿಕೆ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.