ಹುಬ್ಬಳ್ಳಿ: ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಉಣಕಲ್‍ನಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕವಾದ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ದಾಖಲೀಕರಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಪರಂಪರೆ ಸಪ್ತಾಹ: ಚಂದ್ರಮೌಳೇಶ್ವರ ದೇವಾಲಯದಲ್ಲಿ ದಾಖಲೀಕರಣ ಕಾರ್ಯಾಗಾರ
ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಧಾರವಾಡ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಉಣಕಲ್‍ನಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕವಾದ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ದಾಖಲೀಕರಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ವಿಶ್ವ ಪರಂಪರೆ ಸಪ್ತಾಹ....ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ದಾಖಲೀಕರಣ ಕಾರ್ಯಾಗಾರ
ವಲಯದ ಅಧಿಕಾರಿಗಳು ಸ್ಮಾರಕಗಳ ರಚನೆ, ನಿರ್ಮಾಣಕ್ಕಾಗಿ ಉಪಯೋಗಿಸಿದ ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ದಾಖಲೀಕರಣ ಕುರಿತಾಗಿ ಕೆ.ಎಲ್.ಇ ವಿಶ್ವವಿದ್ಯಾಲಯದ ವಾಸ್ತುಶಿಲ್ಪ ಶಾಸ್ತ್ರ ವಿಭಾಗದ ಮುಖ್ಯಸ್ಥ ವಿನಯ ಹಿರೇಮಠ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪುರಾತತ್ವ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.