ಧಾರವಾಡ:ಕುರುಬರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಕತ್ತೆಗಳನ್ನು ಕರೆತಂದು ವಿನೂತನ ರೀತಿಯಲ್ಲಿ ಮೆರವಣಿಗೆ ಮಾಡಲಾಯಿತು.
ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಆಗ್ರಹಿಸಿ ಕತ್ತೆ ಮೆರವಣಿಗೆ - ಧಾರವಾಡ ಸುದ್ದಿ
ಕುರುಬರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಕತ್ತೆಗಳನ್ನು ಕರೆತಂದು ವಿನೂತನ ರೀತಿಯಲ್ಲಿ ಮೆರವಣಿಗೆ ಮಾಡಲಾಯಿತು.

ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹಿಸಿ ಕತ್ತೆ ಮೆರವಣಿಗೆ
ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹಿಸಿ ಕತ್ತೆ ಮೆರವಣಿಗೆ
ಜಿಲ್ಲಾಧಿಕಾರಿ ಕಚೇರಿಗೆ ಬ್ಯಾನರ್ ಹಿಡಿದು ಕತ್ತೆಗಳೊಂದಿಗೆ ಆಗಮಿಸಿದ ಪ್ರತಿಭಟನಾಕಾರರು,ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದೇ ವೇಳೆ, ಹೆಚ್.ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ ಅವರ ತ್ಯಾಗದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಅವರು ಸೋತಿದ್ದರಿಂದ ಅವರಿಗೆ ಮಂತ್ರಿ ಸ್ಥಾನ ನೀಡದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೋಸ ಮಾಡಿದ್ದು, ಸೂಕ್ತ ಸ್ಥಾನಮಾನ ಕೊಡಬೇಕು. ಇಲ್ಲವಾದರೆ ರಾಜ್ಯವ್ಯಾಪ್ತಿ ಹೋರಾಟ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.