ಕರ್ನಾಟಕ

karnataka

ETV Bharat / state

ಕಷ್ಟ ಕಾಲದಲ್ಲಿ ಯಾರಿಗೂ ರೇಷನ್ ನಿರಾಕರಿಸಬಾರದು: ಸಚಿವರ ಸೂಚನೆ - ಆಹಾರ ನಾಗರಿಕ ಸರಬರಾಜು ಸಚಿವ ಕೆ ಗೋಪಾಲಯ್ಯ

ತೂಕ, ಅಳತೆಯಲ್ಲಿ ಮೋಸ ಹಾಗೂ ಪಡಿತರದಾರರಿಂದ ಸೇವಾ ವೆಚ್ಚದ ನೆಪದಲ್ಲಿ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಜಿಲ್ಲೆಯ 508 ಅಂಗಡಿಗಳಲ್ಲೂ ಏಕಕಾಲದಲ್ಲಿ ತೆರೆದು ಪಡಿತರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Don't stop providing ration to poor in any situation Gopalayya
ಸಂಕಷ್ಟ ಕಾಲದಲ್ಲಿ ಯಾರಿಗೂ ರೇಷನ್ ನಿರಾಕರಿಸಬಾರದು: ಸಚಿವ ಗೋಪಾಲಯ್ಯ ಸೂಚನೆ

By

Published : Apr 29, 2020, 10:10 PM IST

ಧಾರವಾಡ: ಕೊರೊನಾ ಸಂಕಷ್ಟ ಕಾಲದಲ್ಲಿ ಯಾರಿಗೂ ರೇಷನ್ ನಿರಾಕರಿಸಬಾರದು. ಪಡಿತರ ಕಾರ್ಡ್ ಇಲ್ಲದವರಿಗೆ ಕೊರೊನಾ ಮುಗಿಯುವವರೆಗೂ ಸೌಲಭ್ಯ ಒದಗಿಸಬೇಕು. ಕೊರೊನಾದ ಸಂಕಷ್ಟದ ಸಮಯದಲ್ಲಿ ಯಾವ ಕಾರ್ಡ್‍ಗಳನ್ನೂ ಅನರ್ಹಗೊಳಿಸಬಾರದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಖಡಕ್ ಸೂಚನೆ ನೀಡಿದ್ದಾರೆ.

ತೂಕ, ಅಳತೆಯಲ್ಲಿ ಮೋಸ ಹಾಗೂ ಪಡಿತರದಾರರಿಂದ ಸೇವಾ ವೆಚ್ಚದ ನೆಪದಲ್ಲಿ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ಸಂದರ್ಭದಲ್ಲಿ ಪಡಿತರ ದಾಸ್ತಾನು, ವಿತರಣೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ವಿತರಣೆ ಕುರಿತಂತೆ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಪಡಿತರದಾರರಿಂದ ಯಾರಾದರೂ ಒಂದು ಪೈಸೆ ಹಣ ಪಡೆದರೆ ಅಂತಹವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಕಂದಾಯ, ಆಹಾರ ಇಲಾಖೆ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ತಂಡಗಳನ್ನು ರಚಿಸಿ ಜಿಲ್ಲೆಯ ಎಲ್ಲ 508 ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಣೆ ಮೇಲೆ ನಿಗಾವಹಿಸಲು ಸೂಚನೆ ನೀಡಿದರು.

ಮೇ. 5ರಿಂದ ರಾಜ್ಯದ ಎಲ್ಲ 19,800 ಪಡಿತರ ಅಂಗಡಿಗಳನ್ನು ಏಕಕಾಲದಲ್ಲಿ ತೆರೆದು ಅಕ್ಕಿ ಮತ್ತು ತೊಗರಿ ಬೇಳೆಯನ್ನು ಒಟ್ಟಿಗೆ ವಿತರಿಸುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗುರುವಾರ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲೆಯ 508 ಅಂಗಡಿಗಳಲ್ಲೂ ಏಕಕಾಲದಲ್ಲಿ ತೆರೆದು ಪಡಿತರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಮಾತನಾಡಿ,‌ ಸಚಿವರಿಗೆ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಬಿ.ಸಿ. ಸತೀಶ್‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ABOUT THE AUTHOR

...view details