ಹುಬ್ಬಳ್ಳಿ: ಪೌರ ಕಾರ್ಮಿಕರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಗರದ ಮಂಟೂರ ರಸ್ತೆಯಲ್ಲಿ 25.99 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ತಂತ್ರಜ್ಞಾನದ ವಸತಿ ಯೋಜನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಪೌರ ಕಾರ್ಮಿಕರಿಗೆ ಸೂರು - govt plans implimented
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ 25.99 ಕೋಟಿ ರೂಪಾಯಿ ವೆಚ್ಚದಲ್ಲಿ ಪೌರ ಕಾರ್ಮಿಕರಿಗೆ ಸೂರು ನೀಡುವ ಉದ್ದೇಶದಿಂದ ಅತ್ಯಾಧುನಿಕ ತಂತ್ರಜ್ಞಾನದ ವಸತಿ ಯೋಜನೆಗೆ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ವಸತಿ ಯೋಜನೆ
ಶಾಸಕ ಪ್ರಸಾದ ಅಬ್ಬಯ್ಯ, ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ಭೂಮಿ ಪೂಜೆ ಮೂಲಕ ಚಾಲನೆ ನೀಡಿದರು. ಪಾಲಿಕೆಯ 320 ಪೌರಕಾರ್ಮಿಕರಿಗೆ ಮನೆ ನಿರ್ಮಿಸುವ ಯೋಜನೆ ಇದಾಗಿದ್ದು, 320 ಜಿ ಪ್ಲಸ್ 3 ಮಾದರಿಯ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಗೃಹ ನಿರ್ಮಾಣ ಮಾಡಲಾಗುತ್ತಿದೆ. ಈ ಮೂಲಕ ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆ ನನಸಾದಂತಾಗಿದೆ.
ಭೂಮಿ ಪೂಜೆ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಪಾಲಿಕೆ ಮಾಜಿ ಸದಸ್ಯ ಶಿವು ಮೆಣಸಿನಕಾಯಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.