ಹುಬ್ಬಳ್ಳಿ :ಬಸ್ ಚಲಾಯಿಸುವಾಗ ಚಾಲಕನಿಗೆ ಮೂರ್ಛೆರೋಗ ಬಂದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಮುಂದಿದ್ದ ವಾಹನಕ್ಕೆ ಗುದ್ದಿದೆ. ಕೂಡಲೇ ಇದನ್ನು ಗಮನಿಸಿದ ಮತ್ತೋರ್ವ ಚಾಲಕ ಬಸ್ ತಡೆದು ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.
ಧಾರವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ಉಣಕಲ್ ಬಳಿ ಬೇಂದ್ರೆ ಸಾರಿಗೆ ಬಸ್ ಚಾಲಕನಿಗೆ ಮೂರ್ಛೆರೋಗ ಬಂದಿದೆ. ಪರಿಣಾಮ ಬಸ್ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಆಗ ಅಲ್ಲೇ ಇದ್ದ ಮತ್ತೋರ್ವ ಚಾಲಕ ಬಸ್ ತಡೆದು ನಿಲ್ಲಿಸಿದ್ದಾನೆ. ಘಟನೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಇತ್ತ ಪಿಡ್ಸ್ ಬಂದು ಅಸ್ವತ್ಥಗೊಂಡಿದ್ದ ಚಾಲಕನನ್ನು ಸ್ಥಳೀಯರು ಆಸ್ಪತ್ರಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿಂದು 50,210 ಜನರಿಗೆ ಕೊರೊನಾ ಪಾಸಿಟಿವ್.. ಶೇ. 22.77ಕ್ಕೆ ಏರಿತು ಪಾಸಿಟಿವಿಟಿ ದರ