ಕರ್ನಾಟಕ

karnataka

ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಹುಬ್ಬಳ್ಳಿಯಲ್ಲಿ ಸುಟ್ಟು ಕರಕಲಾದ ಮನೆ - ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಮನೆ

ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದಲ್ಲಿ ನಡೆದಿದೆ.

electric-short-circuit-house-burnt-
ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ಮನೆ

By

Published : Dec 24, 2019, 12:43 PM IST

ಹುಬ್ಬಳ್ಳಿ: ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದಲ್ಲಿ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ಮನೆ

ಮಂಜುನಾಥ ಯಲ್ಲಪ್ಪ ತಲ್ಲೂರು ಎಂಬುವವರ ಮನೆ ಸುಟ್ಟು ಕರಕಲಾಗಿದ್ದು, ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ‌ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸೇರಿದಂತೆ ಮನೆಗೆ ಸಂಬಂಧಿಸಿದ ಪತ್ರಗಳು ಸುಟ್ಟು ಬೂದಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For All Latest Updates

TAGGED:

ABOUT THE AUTHOR

...view details