ಹುಬ್ಬಳ್ಳಿ:ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ವಾರ್ಡ್ ನಂ. 57ರಲ್ಲಿ ಚರಂಡಿ ನೀರಿನ ಸಮಸ್ಯೆ ಉಂಟಾಗಿರುವುದನ್ನು ಈಟಿವಿ ಭಾರತ್ ಸವಿಸ್ತಾರವಾಗಿ ಸುದ್ದಿ ಬಿತ್ತರಿಸಿತ್ತು, ಸುದ್ದಿ ನೋಡಿ ಎಚ್ಚೆತ್ತುಕೊಂಡ ಪಾಲಿಕೆ ಅಧಿಕಾರಿಗಳು ಚರಂಡಿ ದುರಸ್ತಿ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ.
ಸುಮಾರು ತಿಂಗಳುಗಳಿಂದ ಚರಂಡಿ ಸಮಸ್ಯೆಗೆ ಇಲ್ಲಿನ ಸ್ಥಳೀಯರು ಹೈರಾಣಾಗಿದ್ದರು. ಪಾಲಿಕೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಇದರಿಂದ ಸ್ಥಳೀಯರು ಆಕ್ರೋಶಗೊಂಡು ಮಾಧ್ಯಮದ ಮೂಲಕ ತಮ್ಮ ಅಳಲು ತೋಡಿಕೊಂಡಿದ್ದರು.