ಧಾರವಾಡ:ರಾಜ್ಯಾದ್ಯಂತ ಕೊರೊನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾನುವಾರ ದಿನಗಳಂದು ಸರ್ಕಾರದಿಂದ ಸಂಪೂರ್ಣ ಲಾಕ್‍ಡೌನ್ ಆದೇಶಿಸಲಾಗಿದೆ.
ಪ್ರತಿ ಭಾನುವಾರ ಮದ್ಯ ಮಾರಾಟ, ಸಾಗಾಟ ನಿಷೇಧ: ಡಿಸಿ ಆದೇಶ - Every Sunday Liquor Sale, transport Prohibition
ಕೊರೊನಾ ನಿಯಂತ್ರಿಸಲು ಪ್ರತಿ ಭಾನುವಾರ ಲಾಕ್ ಡೌನ್ ಗೆ ಆದೇಸಿದ್ದು, ಈ ದಿನದಂದು ಮದ್ಯ ಮಾರಾಟ, ಸಾಗಾಟ, ಉತ್ಪಾದನೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ
ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರದ ರೀತ್ಯ ಜುಲೈ 5, 12, 19, 26, ಹಾಗೂ ಆಗಸ್ಟ್ 2 ರಂದು ಸಂಪೂರ್ಣ ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ನಿತೇಶ್ ಕೆ. ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ.
ಮದ್ಯ ಉತ್ಪಾದನೆ, ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿದ ಭಾನುವಾರಗಳ ಹಿಂದಿನ ದಿನ ಅಂದರೆ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ 9 ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಪೊಲೀಸ್ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಹುಬ್ಬಳ್ಳಿ, ಆರಕ್ಷಕ ಅಧೀಕ್ಷಕರು, ಧಾರವಾಡ, ಅಬಕಾರಿ ಉಪ ಆಯುಕ್ತರು, ಧಾರವಾಡ, ಹಾಗೂ ಹೆಚ್ಚುವರಿ ಆರಕ್ಷಕ ಅಧೀಕ್ಷಕರು ಧಾರವಾಡ ಜಿಲ್ಲೆಯಾದ್ಯಂತ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಆದೇಶಿಸಿದ್ದಾರೆ.