ಕರ್ನಾಟಕ

karnataka

ETV Bharat / state

ಬಿಜೆಪಿ ಅತಿದೊಡ್ಡ ಪಕ್ಷ.. ಗದ್ದುಗೆ ಏರಲು ಸಮಸ್ಯೆಯಿಲ್ಲ ಎಂದ್ರು ಶೆಟ್ಟರ್ - ಜಗದೀಶ್ ಶೆಟ್ಟರ್

ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ಪಾಲಿಕೆ ಗದ್ದುಗೆ ಏರಲು ಸಾಧ್ಯವಿಲ್ಲ. ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿದ್ದು, ನಾವು ಗದ್ದುಗೆ ಏರುತ್ತೇವೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶೆಟ್ಟರ್
ಶೆಟ್ಟರ್

By

Published : Sep 6, 2021, 2:22 PM IST

ಹುಬ್ಬಳ್ಳಿ:ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಪಾಲಿಕೆ ಗದ್ದುಗೆ ಏರಲು ಸಮಸ್ಯೆಯಿಲ್ಲ ಎಂದು ಶೆಟ್ಟರ್ ವಿಶ್ವಾಸ

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿದೆ. ಪಾಲಿಕೆ ಅಧಿಕಾರದ ಗದ್ದುಗೆ ಏರಲು ಬಿಜೆಪಿಗೆ ಯಾವುದೇ ಸಮಸ್ಯೆಯಿಲ್ಲ. ಈಗಾಗಲೇ ನಮ್ಮ ಬಳಿ ಆರು ಜನಪ್ರತಿನಿಧಿಗಳ ಬಲವಿದೆ. ಬಂಡಾಯ ಅಭ್ಯರ್ಥಿಗಳು ಕೂಡ ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಮೂರು ಪಾಲಿಕೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ: ಡಿಕೆಶಿ

ಬಂಡಾಯಗಾರರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಪಕ್ಷ ತೀರ್ಮಾನಿಸುತ್ತೆ. ಕಾಂಗ್ರೆಸ್ ಏನೇ ಮಾಡಿದರೂ ಬಹುಮತ ಬರಲ್ಲ, ನಮಗೆ ಬಹುಮತ ಸಿಗಲಿದ್ದು, ನಾವು ಯಾವುದೇ ತೊಂದರೆ ಇಲ್ಲದೇ ಪಾಲಿಕೆ ಗದ್ದುಗೆ ಏರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ABOUT THE AUTHOR

...view details