ಕರ್ನಾಟಕ

karnataka

ETV Bharat / state

ಯೋಗೇಶಗೌಡ ಕೊಲೆ ಪ್ರಕರಣ: ಹೈಕೋರ್ಟ್​​ನಲ್ಲಿಂದು ವಿನಯ್ ಜಾಮೀನು ಅರ್ಜಿ ವಿಚಾರಣೆ - yogeshgowda murder case

ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧಿತ ಮಾಜಿ ಸಚಿವ ವಿನಯ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಗೆ ಹೈಕೋರ್ಟ್ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಸೂಚಿಸಿತ್ತು. ಸಿಬಿಐ ಪರ ವಕೀಲರಿಂದ ಇಂದು ತಕರಾರು ಸಲ್ಲಿಕೆಯಾಗುವ ಸಾಧ್ಯತೆಯಿದೆ.

ex-minister-vinay-kulkarni-bail-application-hearing-in-high-court
ಯೋಗೇಶಗೌಡ ಕೊಲೆ ಪ್ರಕರಣ

By

Published : Jan 6, 2021, 8:28 AM IST

ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್​​ನಲ್ಲಿ‌ ನಡೆಯಲಿದೆ.

ವಿನಯ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಗೆ ಹೈಕೋರ್ಟ್ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಸೂಚಿಸಿತ್ತು. ಸಿಬಿಐ ಪರ ವಕೀಲರಿಂದ ಇಂದು ತಕರಾರು ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಸಿಬಿಐ ತಕರಾರು ಅರ್ಜಿ ಆಧರಿಸಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ವಿನಯ ಕುಲಕರ್ಣಿ ಕಳೆದ ಎರಡು ತಿಂಗಳಿನಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

ಧಾರವಾಡದ ಸಿಬಿಐ ವಿಶೇಷ ‌ನ್ಯಾಯಾಲಯದಲ್ಲಿ ‌ವಿನಯ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕಾರಗೊಂಡಿತ್ತು. ಆ ಹಿನ್ನೆಲೆಯಲ್ಲಿ ವಿನಯ ಪರ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು.

ABOUT THE AUTHOR

...view details