ಮಾಜಿ ಸಚಿವ ವಿನಯ್ ಕುಲಕರ್ಣಿ, ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ - ವಿನಯ್ ಕುಲಕರ್ಣಿ, ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ
15:15 January 08
ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿಯವರ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಜನವರಿ 22 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿಯವರ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಜನವರಿ 22 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಳೆದ 2 ತಿಂಗಳಿಂದ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಲ್ಲಿದ್ದಾಋಎ. ಅವರ ಸೋದರ ಮಾವ ಚಂದ್ರಶೇಖರ ಇಂಡಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿದ್ದು, ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.