ನವಲಗುಂದ: ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಪಹಣಿ ಪತ್ರ ಹಾಗೂ ಬೆಳೆ ಸಮೀಕ್ಷೆ ಲೋಪದೋಷಗಳಿಗೆ ಆಡಳಿತ ಸರ್ಕಾರವೇ ನೇರ ಹೊಣೆ ಎಂದು ನವಲಗುಂದ ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ಆರೋಪಿಸಿದರು.
ನವಲಗುಂದ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿ ನಂತರ ತಹಶೀಲ್ದಾರ್ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಜನ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕೆಗ್ಗೊಲೆಯಾಗಿದೆ. ಹಾದಾಯಿ, ಕಳಸಾ-ಬಂಡೂರಿ ಕೆಲಸ ಏಕೆ ಪ್ರಾರಂಭಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.