ಧಾರವಾಡ: ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ರಾಜಕೀಯ ಪಕ್ಷಗಳು ಈಗಿನಿಂದಲೇ ಕಾರ್ಯತಂತ್ರಗಳನ್ನು ರೂಪಿಸುತ್ತಿವೆ.
ರಾಜ್ಯಕ್ಕೆ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ: ಮಾಜಿ ಶಾಸಕ ಕೋನರೆಡ್ಡಿ - N H Konareddy latest News
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆಯಲಿದ್ದು, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿದ್ದಾರೆ ಎಂದು ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಭವಿಷ್ಯ ನುಡಿದರು.
ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ
ಈ ಕುರಿತಾಗಿ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ, ರಾಜ್ಯದಲ್ಲಿ ಮುಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ. ನಾವು ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ಜೆಡಿಎಸ್ ಪಕ್ಷದ ವ್ಯಕ್ತಿಯನ್ನು ಸಿಎಂ ಮಾಡ್ತೀವಿ ಎಂದರು.
ರಾಜಕೀಯ ಬೆಳವಣಿಗೆ ಕುರಿತು ಕೆಲ ಗುರೂಜಿಗಳು, ರಾಜಕೀಯ ವಿಶ್ಲೇಷಕರು ಹೇಳುವಂತೆ ಹೆಚ್.ಡಿ. ಕುಮಾರಸ್ವಾಮಿ ಅವರೇ ಸಿಎಂ ಆಗುತ್ತಾರೆ. ಈಗಾಗಲೇ ಕುಮಾರಸ್ವಾಮಿ ಜನರ ಮನ ಗೆದ್ದಿದ್ದಾರೆ. ಜನರ ಹೃದಯದಲ್ಲಿದ್ದಾರೆ. ಮುಂದಿನ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಸಿಎಂ ಆಗೋದು ಫಿಕ್ಸ್ ಎಂದು ಹೇಳಿದರು.