ಧಾರವಾಡ:ಸಾಲ ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಉಣಕಲ್ (48) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾರೆ. ನಗರದ ಹೊರ ಹೊಲಯದಲ್ಲಿರುವ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದು, 2 ಎಕರೆ ಜಮೀನಿನಲ್ಲಿ 3 ಲಕ್ಷ ಸಾಲ ಪಡೆದಿದ್ದರು ಎನ್ನಲಾಗ್ತಿದೆ.
ಧಾರವಾಡ: ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ - dharwad Farmer commits suicide
ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡಿದ್ದ ಸಾಲ ತೀರಿಸಲಾಗದೆ ಸಾವಿಗೆ ಶರಣಾಗಿದ್ದಾರೆ.
ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
ಅಕಾಲಿಕ ಮಳೆಯಿಂದಾಗಿ ಬೆಳೆಗೆ ಸಂಪೂರ್ಣ ಹಾನಿಯಾದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ದಾವಣಗೆರೆ: ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ