ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ತಂತಿ ತಗುಲಿ ರೈತ ಸಾವು: ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ! - ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ
ಜಮೀನಿಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿದ್ದಾರೆ.
ನಾಗರಾಜ್ ಮಾಯಣ್ಣವರ (27) ಮೃತ ರೈತ. ಜಮೀನಿಗೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾನೆ.ಘಟನೆಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಕೆಲವು ದಿನಗಳ ಹಿಂದೆ ಲಾರಿಗೆ ಸಿಲುಕಿ ತಂತಿಕಟ್ಟಾಗಿ ಬಿದ್ದಿದೆ. ವಿದ್ಯುತ್ ತಂತಿಯನ್ನು ತೆಗೆಯುವಂತೇ ಸ್ಥಳೀಯರು ಮನವಿ ಮಾಡಿದ್ರು, ಆದ್ರೆ ಅಧಿಕಾರಿಗಳು ಮನವಿಗೆ ಸ್ಪಂದಿಸಿದ ಕಾರಣಕ್ಕೆ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.