ಧಾರವಾಡ:ರೈತರ ಬೆಳೆಗೆ ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಸ್ಥಾಪನೆ ಮಾಡುವಂತೆ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿದರು.
ರೈತರ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ - ಧಾರವಾಡ ಸುದ್ದಿ
ಕಳೆದ ಮೂರು ದಿನಗಳಿಂದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದು, ಇಂದು ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿದರು.
farmer-fasting-protest-at-darwad
ಕಳೆದ ಮೂರು ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿರುವ ರೈತರು ಇಂದು, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಜಿಲ್ಲಾಧಿಕಾರಿ ಜೊತೆ ರೈತರ ಬೇಡಿಕೆ ಕುರಿತು ಚರ್ಚೆ ಮಾಡಿದರು.
ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುವುದಾಗಿ ರೈತರಿಗೆ ಭರವಸೆ ನೀಡಿದ ಬಸವರಾಜ ಹೊರಟ್ಟಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿಕೊಂಡರು. ಆದರೆ, ಬೇಡಿಕೆ ಈಡೇರಿಸಿದ ಬಳಿಕವೇ ಸತ್ಯಾಗ್ರಹ ಕೈಬಿಡುವುದಾಗಿ ಹೊರಟ್ಟಿ ಅವರ ಮನವಿಯನ್ನು ರೈತರು ನಯವಾಗಿ ತಳ್ಳಿ ಹಾಕಿದರು.