ಧಾರವಾಡ:ಬೆಳೆ ಹಾನಿಗೆ ಪರಿಹಾರ ಘೋಷಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಹಾಗೂ ರೈತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ವಿಪರೀತ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಲಾಕ್ ಡೌನ್ ನಿಂದಾಗಿ ತತ್ತರಿಸಿರುವ ರೈತರಿಗೆ ಇದೀಗ ಮಳೆಯಿಂದಾಗಿ ಬೆಳೆ ನಷ್ಟವಾಗಿದೆ. ಅತೀವೃಷ್ಟಿಯಿಂದ ಬೆಳೆ ಹಾನಿಯಾಗಿದೆ. ಕೂಡಲೇ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ಈ ಕೂಡಲೇ ಎಲ್ಲಾ ತಾಲೂಕುಗಳಲ್ಲಿ ವ್ಯಾಪಕವಾಗಿ ಬೆಳೆಹಾನಿ ಸರ್ವೇ ನಡೆಸಿ ಬೆಳೆ ಹಾನಿಗೊಳಗಾದ ರೈತರಿಗೆ ವೈಜ್ಞಾನಿಕ ಮಾನದಂಡದ ಮೇಲೆ ಪರಹಾರ ಘೋಷಿಸಬೇಕು ಎಂದು ಪ್ರತಿಭಟನೆ ಮೂಲಕ ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.