ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ರೈತರ ಪ್ರತಿಭಟನೆ - farmers

ಸಾಲಮನ್ನಾ, ಬರ ಪರಿಹಾರ ಹಾಗು ಬೆಳೆ ವಿಮೆ ನೀಡದ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ, ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಿ ಸಮಸ್ಯೆಗೆ ಸ್ಪಂದಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

Dharwad
ಧಾರವಾಡದಲ್ಲಿ ರೈತರ ಪ್ರತಿಭಟನೆ

By

Published : Mar 13, 2020, 7:23 PM IST

ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.

ಧಾರವಾಡದ ಕಲಾಭವನದಿಂದ ಮೆರವಣಿಗೆ ಮೂಲಕ ಸಾಗಿ ಬಂದು ರೈತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸಾಲಮನ್ನಾ, ಬರ ಪರಿಹಾರ, ಬೆಳೆ ವಿಮೆ ನೀಡದ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಿ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details