ಹುಬ್ಬಳ್ಳಿ: ರೈತ ವಿರೋಧಿ ನೀತಿ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಕೇಂದ್ರ ಸರ್ಕಾರ ಲಾಠಿ ಪ್ರಹಾರ ನಡೆಸಿದೆ ಎಂದು ಆರೋಪಿಸಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ದೆಹಲಿಯಲ್ಲಿ ರೈತರ ಮೇಲಿನ ಲಾಠಿ ಚಾರ್ಜ್ ಖಂಡನೀಯ: ಹುಬ್ಬಳ್ಳಿಯಲ್ಲಿ ಪ್ರತಿಭಟನೆ - ಹುಬ್ಬಳ್ಳಿ 2020
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ನಡೆಸಿದ ಲಾಠಿ ಪ್ರಹಾರ ಖಂಡನೀಯ ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಕಾಯ್ದೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಲಾಠಿ ಚಾರ್ಜ್ ಮಾಡಲಾಗಿದೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.