ಹುಬ್ಬಳ್ಳಿ: ಸಾಲಬಾಧೆಗೆ ಬೇಸತ್ತು ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - ರೈತ ಆತ್ಮಹತ್ಯೆ
ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ
ವೀರಸಂಗಪ್ಪ ಗುದ್ದಿನ ಮೃತ ದುರ್ದೈವಿ. ತನ್ನ ಜಮೀನಿನಲ್ಲಿಯೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೀರಸಂಗಪ್ಪ ಗುದ್ದಿನ ಬ್ಯಾಂಕ್ ಆಫ್ ಬರೋಡಾದಲ್ಲಿ 1.52 ಲಕ್ಷ ಹಾಗೂ ಕೈಗಡವಾಗಿಯೂ ಮತ್ತಷ್ಟು ಸಾಲ ಮಾಡಿದ್ದ ಎನ್ನಲಾಗಿದೆ. ಈ ಬಾರಿಯ ಮುಂಗಾರು, ಹಿಂಗಾರು ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಾಳಲಾರದೆ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಮೊಟ್ಟ ಮೊದಲ ಬಾರಿಗೆ ದ್ರಾಕ್ಷಿ ಬೆಳೆದು ಹೆಸರುಗಳಿಸಿದ ಪದವೀಧರ ಯುವ ರೈತ...