ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ...! - Farmer suicide in hubli
ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ ರೈತ ಸುಭಾಷ್ ಸಣ್ಣಮನಿ, ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈತ ಆತ್ಮಹತ್ಯೆ
ಸುಭಾಷ್ ಸಣ್ಣಮನಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.