ಧಾರವಾಡ:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರನ್ನು ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು.
ಯತ್ನಾಳ್ ಭಾವಚಿತ್ರ ದಹಿಸಿ ಜಿಲ್ಲಾ ರೈತ ಸಂಘದಿಂದ ಪ್ರತಿಭಟನೆ - senior Freedom Fighter Doreswamy
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರನ್ನು ಅವಹೇಳನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಿಲ್ಲಾ ರೈತ ಸಂಘ ಪ್ರತಿಭಟನೆ ನಡೆಸಿತು.
ಯತ್ನಾಳ್ ಭಾವಚಿತ್ರ ದಹಿಸಿ ರೈತ ಸಂಘಟನೆ ಪ್ರತಿಭಟನೆ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ರೈತ ಸಂಘದ ಸದಸ್ಯರು, ಬಿಜೆಪಿ ಶಾಸಕ ಯತ್ನಾಳ್ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅವರ ವಿರುದ್ಧ ಘೋಷಣೆ ಕೂಗಿದರು.
ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಕ್ರಮ ಕೈಗೊಳ್ಳದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.