ಕರ್ನಾಟಕ

karnataka

ETV Bharat / state

ರೈತ,ಕಾರ್ಮಿಕ ವಿರೋಧಿ ಕಾಯ್ದೆಗಳನ್ನ ಹಿಂಪಡೆಯಲು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ - National Highway Band

ರೈತರಿಗೆ ಮಾರಕವಾದ ಕಾಯ್ದೆ ಜಾರಿ ಸರಿಯಲ್ಲ. ಮೇಲಿಂದ ಮೇಲೆ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ಆ ವರ್ಗಗಳನ್ನ ಹತ್ತಿಕ್ಕುವ ಕೆಲಸ ಮಾಡ್ತಿದೆ..

Farmers protest
ರಾಷ್ಟ್ರೀಯ ಹೆದ್ದಾರಿ ಬಂದ್ ರೈತರ ಪ್ರತಿಭಟನೆ

By

Published : Sep 25, 2020, 5:41 PM IST

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಹೊರವಲಯದ ಗಬ್ಬೂರು ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4 ತಡೆದು ಪ್ರತಿಭಟಿಸಲಾಯ್ತು.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ

ರೈತರಿಗೆ ಮಾರಕವಾದ ಕಾಯ್ದೆ ಜಾರಿ ಸರಿಯಲ್ಲ. ಮೇಲಿಂದ ಮೇಲೆ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ಆ ವರ್ಗಗಳನ್ನ ಹತ್ತಿಕ್ಕುವ ಕೆಲಸ ಮಾಡ್ತಿದೆ. ಕೂಡಲೇ ಈ ಅವೈಜ್ಞಾನಿಕವಾದ ಎಪಿಎಂಸಿ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ರೈತರು ಹಾಗೂ ಕಾರ್ಮಿಕ ವರ್ಗವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ರೀತಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ, ಬಾಬಾಜಾನ್ ಮುಧೋಳ, ಸಿದ್ದು ತೇಜಿ, ರಾಜಶೇಖರ್ ಮೆಣಸಿನಕಾಯಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ABOUT THE AUTHOR

...view details