ಹುಬ್ಬಳ್ಳಿ: ಪೊಲೀಸರು ಬೇಗ ಹೋಟೆಲ್ಗಳನ್ನು ಬಂದ್ ಮಾಡಿಸಿದ್ದರಿಂದ ಊಟ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ನೂರಾರು ರೈತರು ಇಲ್ಲಿನ ಎಪಿಎಂಸಿ ಎದುರು ಹು - ಧಾ ಮುಖ್ಯ ರಸ್ತೆ ಹಾಗೂ ಬಿಆರ್ಟಿಎಸ್ ರಸ್ತೆ ಬಂದ್ ಮಾಡಿ ತಡರಾತ್ರಿ ಪ್ರತಿಭಟನೆ ನಡೆಸಿದರು.
ಮೆಣಸಿನಕಾಯಿ ಮಾರಾಟಕ್ಕೆ ಧಾರವಾಡ ಸೇರಿದಂತೆ ಗದಗ, ಬಾಗಲಕೋಟೆ ಜಿಲ್ಲೆ ಹಾಗೂ ಬೇರೆ ಬೇರೆ ಊರುಗಳಿಂದ ರೈತರು ಬಂದಿದ್ದರು. ಮೆಣಸಿನಕಾಯಿ ತೂಕ ಆಗುವ ಒಳಗೆ ಪೊಲೀಸರು ಎಲ್ಲ ಹೋಟೆಲ್ಗಳನ್ನು ಬಂದ್ ಮಾಡಿಸಿದ್ದಾರೆ. ಹೀಗಾಗಿ, ಇಲ್ಲಿ ವಾಸ್ತವ್ಯ ಹೂಡಿರುವ ನಮಗೆ ರಾತ್ರಿ ಊಟ ಸಿಗುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ, ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು.
ಸ್ಥಳಕ್ಕೆ ಎಸಿಪಿ ವಿನೋದ್ ಮುಕ್ತೇದಾರ ಹಾಗೂ ಎಪಿಎಂಸಿ ನವನಗರ ಠಾಣೆ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ತೆರಳಿ ಪತ್ರಿಭಟನಾನಿರತ ರೈತರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು. ಜೊತೆಗೆ ಅವರಿಗೆ ಎಪಿಎಂಸಿಯಲ್ಲಿಯೇ ಊಟದ ವ್ಯವಸ್ಥೆ ಮಾಡಿಸಿದರು.