ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಹಳೇಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಆನಂದ ನಗರದ ಜೈಲಾನಿ ಶೇಖ್ ಹಾಗೂ ಜಾವೀದ ಶೇಖ್ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ 6-7 ಜನ ಯುವಕರ ಗುಂಪು ಹಲ್ಲೆ ಮಾಡಿದೆ.
ಹಳೇಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು : ಕ್ಷುಲ್ಲಕ ಕಾರಣಕ್ಕೆ ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ - two injured in attack
7 ಜನರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ನಿನ್ನೆ ರಾತ್ರಿ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಹಳೇಹುಬ್ಬಳ್ಳಿಯಲ್ಲಿ ನಡೆದಿದೆ. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಘಟನೆಯಿಂದ ತೀವ್ರವಾಗಿ ಗಾಯಗೊಂಡ ಯುವಕರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬೈಕ್ ಬಿಟ್ಟು ಪರಾರಿಯಾದ ಯುವಕನ ಬಂಧನ