ಹುಬ್ಬಳ್ಳಿ: ಕೋವಿಡ್ನಿಂದ ಗುಣಮುಖರಾಗಿರುವ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿದೆ. ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರಿಂದ ಹುಬ್ಬಳ್ಳಿಯ ಮುಲ್ಲಾ ಓಣಿಯ P-233 (5 ವರ್ಷದ) ಸಂಖ್ಯೆಯ ಬಾಲಕ ಹಾಗೂ ಈ ಬಾಲಕನ ತಂದೆ P-236 (37 ವರ್ಷ) ಇಬ್ಬರೂ ಸಂಪೂರ್ಣ ಗುಣಮುಖರಾಗಿದ್ದಾರೆ.
ಆಸ್ಪತ್ರೆಯಿಂದ ಬಿಡುಗಡೆಯಾದ ತಂದೆ - ಮಗ: ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ ಜನ - Father and son released
ಮಹಾಮಾರಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಹುಬ್ಬಳ್ಳಿ ಜನ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ
24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿದ್ದು, ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇಬ್ಬರನ್ನೂ ಇಂದು ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 06 ಜನ ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯ 04 ಜನ ಹಾಗೂ ಬಾಗಲಕೋಟ ಜಿಲ್ಲೆಯ ಬದಾಮಿಯ ಒಬ್ಬರು ಕಿಮ್ಸ್ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
Last Updated : May 4, 2020, 9:05 PM IST