ಹುಬ್ಬಳ್ಳಿ:ಪ್ರಚೋದನಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ನಗರದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನ ಗಣೇಶ ನಿಮಜ್ಜನ ಹಿನ್ನೆಲೆಯಲ್ಲಿ ಮೈದಾನಕ್ಕೆ ಭೇಟಿ ಕೊಟ್ಟು ಗಣೇಶ ದರ್ಶನ ಪಡೆದಿದ್ದ ಮುತಾಲಿಕ್, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದರು.
ಪ್ರಚೋದನಕಾರಿ ಭಾಷಣ ಆರೋಪ.. ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಮುತಾಲಿಕ್ ವಿರುದ್ದ ದೂರು ದಾಖಲು
ಪ್ರಚೋದನಕಾರಿ ಭಾಷಣ ಆರೋಪದ ಹಿನ್ನೆಲೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮೋದ್ ಮುತಾಲಿಕ್
Published : Sep 21, 2023, 11:04 PM IST
ಈ ವೇಳೆ ಮಾತನಾಡುವ ವೇಳೆ ಅನ್ಯ ಧರ್ಮದ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದ ಮೇಲೆ ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಅವರು ದೂರು ದಾಖಲು ಮಾಡಿದ್ದಾರೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ರಾಜ್ಯಪಾಲರಿಗೆ ಮನವಿ: ಪ್ರಮೋದ್ ಮುತಾಲಿಕ್