ಹುಬ್ಬಳ್ಳಿ:ಪೊಲೀಸ್ ಇಲಾಖೆಯವರು ನಿಯಮ ಉಲ್ಲಂಘಿಸಿದ ಸಾರ್ವಜನಿಕರಿಗೆ ದಂಡ ಹಾಕಿರುವುದನ್ನು ನಾವು ನೋಡಿದ್ದೇವೆ. ಆದರೆ ಪೊಲೀಸರಿಂದ ಪೊಲೀಸ್ ವಾಹನಕ್ಕೆ ದಂಡ ಹಾಕಿರುವ ಪ್ರಕರಣವೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯಲ್ಲಿ ಪೊಲೀಸರ ವಾಹನಕ್ಕೆ ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ನಗರದ ಚೆನ್ನಮ್ಮ ವೃತ್ತದಲ್ಲಿ ವಾಹನ ತಪಾಸಣೆ ವೇಳೆ ವಾಹನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ತುಂಬಿಕೊಂಡು ಬಂದು ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಪೊಲೀಸ್ ವಾಹನಕ್ಕೆ ದಂಡ ವಿಧಿಸಿದ್ದಾರೆ.