ಹುಬ್ಬಳ್ಳಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಕಾರ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಖಡಕ್ ಆದೇಶ ನೀಡಿದ್ದರೂ ಬೈಕ್ ಸವಾರರು ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಅಂಥವರಿಗೆ ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ : ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಬಿತ್ತು ದಂಡ - ಹುಬ್ಬಳ್ಳಿಯಲ್ಲಿ ಮಾಸ್ಕ್ ಇಲ್ಲದ ಬೈಕ್ ಸವಾರರಿಗೆ ದಂಡ
ಮಹಾನಗರ ಪಾಲಿಕೆ ಅಧಿಕಾರಿಗಳು ಬಹುತೇಕ ಭಾಗಗಳಲ್ಲಿ ಮಾಸ್ಕ್ ಇಲ್ಲದೆ ಬರುವವರಿಗೆ 200 ರೂ. ದಂಡ ವಿಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರು ಸಹ ಸಾರ್ವಜನಿಕರು ಭಯವಿಲ್ಲದೆ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡದೇ ಓಡಾಡುತ್ತಿದ್ದರು. ಇದನ್ನು ಮನಗಂಡ ಮಹಾನಗರ ಪಾಲಿಕೆ ಅಧಿಕಾರಿಗಳು ಬಹುತೇಕ ಭಾಗಗಳಲ್ಲಿ ಮಾಸ್ಕ್ ಇಲ್ಲದೆ ಬರುವವರಿಗೆ 200 ರೂ. ದಂಡ ವಿಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿಸಿದರು.