ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಎನ್​ಐಎ ದಾಳಿ ಖಂಡಿಸಿ ಪ್ರತಿಭಟಿಸಿದ 51 ಮಂದಿ ವಿರುದ್ಧ ಎಫ್ಐಆರ್

ಎಸ್​ಡಿಪಿಐ ಹಾಗೂ ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಡೆಸಿದ ದಾಳಿಯನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದ 51 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎನ್​ಐಎ ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ
protest against nia attack

By

Published : Sep 24, 2022, 12:48 PM IST

ಹುಬ್ಬಳ್ಳಿ: ಎಸ್​ಡಿಪಿಐ ಹಾಗೂ ಪಿಎಫ್ಐ ಕಚೇರಿಗಳ ಮೇಲೆ ಎನ್​ಐಎ ದಾಳಿಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದ್ದು, 51 ಜನರ ವಿರುದ್ಧ ಕೇಸ್ ದಾಖಲಾಗಿದೆ.

51 ಮಂದಿ ವಿರುದ್ಧ ಎಫ್ಐಆರ್ ದಾಖಲು

ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ 51 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಕೌಲ್‌ಪೇಟೆ ಬಳಿ ಅನುಮತಿ ಪಡೆಯದೇ ಏಕಾಏಕಿ ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು.

ಎನ್​ಐಎ ದಾಳಿ ಖಂಡಿಸಿ ಹುಬ್ಬಳ್ಳಿಯಲ್ಲಿ ನಡೆದ ಪ್ರತಿಭಟನೆ

ಇದನ್ನೂ ಓದಿ:ಬೆಳಗಾವಿ - ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ, ಎಸ್​ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ಈ ಸಂದರ್ಭದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದರು. ಇದೀಗ 51 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ABOUT THE AUTHOR

...view details